ಮುಧುರೈ: ರೆಫ್ರಿಜರೇಟರ್‌ ಸ್ಫೋಟಕ್ಕೆ ಇಬ್ಬರು ವಿದ್ಯಾರ್ಥಿನಿಯರು ದುರ್ಮರಣ, ಹಲವರಿಗೆ ಗಾಯ

Sampriya

ಗುರುವಾರ, 12 ಸೆಪ್ಟಂಬರ್ 2024 (16:03 IST)
ಮಧುರೈ: ಇಲ್ಲಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯರನ್ನು ಪರಿಮಳಾ ಹಾಗೂ ಶರಣ್ಯಾ ಎಂದು ಗುರುತಿಸಲಾಗಿದೆ. ರೆಫ್ರಿಜರೇಟರ್‌ ಸ್ಫೋಟಗೊಂಡ ಪರಿಣಾಮ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪಿ. ತೈಗರಾಜನ್ ಅವರು, 'ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿತ್ತು. ಕಟ್ಟಡ ನೆಲಸಮಗೊಳಿಸಲು ಸ್ಥಳೀಯ ಸಂಸ್ಥೆ ನೋಟಿಸ್ ನೀಡಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದೆ. ದಾಖಲೆಗಳನ್ನು ಪರಿಶೀಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ