ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್

ಬುಧವಾರ, 29 ಮಾರ್ಚ್ 2023 (06:47 IST)
ನವದೆಹಲಿ : ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ.
 
ಇಂದು (ಬುಧವಾರ) ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ