ಬದಲಾವಣೆ ತರುವವರನ್ನು ಮುಂದಕ್ಕೆ ಕರೆದುಕೊಂಡು ಬಂದೆ. ಅಧಿಕಾರ ಸಿಗುತ್ತಲೇ ನಿಮ್ಮ ತಲೆ ಕೆಟ್ಟು ಹೋಗಿದೆ. ಕೆಲ ನಾಯಕರಿಗೆ ಮೂಗು ತೂರಿಸುವದಷ್ಟೇ ಕೆಲಸ. ಕಿರುಚಾಡೋರನ್ನ ಪಕ್ಷದಿಂದ ಹೊರಕ್ಕೆ ಹಾಕ್ತಿನಿ ಎಂದು ಮುಲಾಯಂ ಗುಡುಗಿದ್ದು, ಎಲ್ಲು ಕೂಡ ಮಗನ ಹೆಸರನ್ನು ಪ್ರಸ್ತಾಪಿಸದೇ ಮಗ ಪಕ್ಷ ಬಿಟ್ಟು ಹೋದರೂ ಚಿಂತೆ ಇಲ್ಲ ಎನ್ನುವ ಇಂಗಿತವನ್ನು ಹೊರಹಾಕಿದ್ದಾರೆ.
ಪಕ್ಷ ಕಟ್ಟುವಾಗ ನಾನು ಸಹೋದರನ ಜತೆಗಿದ್ದೆ. ತುರ್ತು ಪರಿಸ್ಥಿತಿಯಲ್ಲಿ ಮುಲಾಯಂ ಜೈಲಿಗೆ ಹೋದಾಗ ನಾನು ಪಕ್ಷವನ್ನು ನಿಭಾಯಿಸಿದ್ದೇನೆ. ಆದರೆ ನನ್ನಿಂದ ಅಧಿಕಾರವನ್ನು ಕಸಿಯಲಾಯ್ತು. ನನ್ನದೇನು ತಪ್ಪಿತ್ತು, ಇದೆಲ್ಲ ನನಗೆ ದುಃಖ ತಂದಿದೆ ಎಂದು ಮುಲಾಯಂ ಸಹೋದರ ಶಿವಪಾಲ್ ಸಿಂಗ್ ತಮ್ಮ ನೋವನ್ನು ಹೊರಹಾಕಿದ್ದಾರೆ.
ಗಂಗಾಜಲ ಮುಟ್ಟಿ ಪ್ರಮಾಣ ಮಾಡುತ್ತೇನೆ ಅಖಿಲೇಶ್ ಯಾದವ್ ಹೊಸ ಪಕ್ಷ ಕಟ್ಟಲು, ವಿರೋಧಪಕ್ಷದವರ ಜತೆ ಮೈತ್ರಿ ಮಾಡಿಕೊಳ್ಳಲು ತಯಾರಾಗಿದ್ದರು ಎಂದು ಗುಡುಗಿರುವ ಶಿವಪಾಲ್, ಪಕ್ಷವನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ.