ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Sampriya

ಬುಧವಾರ, 9 ಜುಲೈ 2025 (14:26 IST)
ನವದೆಹಲಿ: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್‌ ಮೈಂಡ್‌ ತಹವ್ವುರ್ ರಾಣಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಬುಧವಾರ ಆಗಸ್ಟ್ 13 ರವರೆಗೆ ವಿಸ್ತರಿಸಿದೆ. 

ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ರಾಣಾ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ನಂತರ ಆದೇಶ ನೀಡಿದರು.  

ನ್ಯಾಯಾಲಯವು ಕಳೆದ ತಿಂಗಳು ಅವರ ನ್ಯಾಯಾಂಗ ಬಂಧನವನ್ನು ಜುಲೈ 9 ರವರೆಗೆ ವಿಸ್ತರಿಸಿತ್ತು. ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಈ ಹಿಂದೆ ನೀಡಲಾದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ರಾಣಾ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ನಂತರ ಆದೇಶವನ್ನು ನೀಡಿದರು.

ರಾಣಾ ಅವರ ಯೋಗಕ್ಷೇಮದ ಬಗ್ಗೆ ಅವರ ವಕೀಲರು ಕಳವಳ ವ್ಯಕ್ತಪಡಿಸಿದ ನಂತರ ನ್ಯಾಯಾಧೀಶರು ಜೂನ್ 9 ರೊಳಗೆ ರಾಣಾ ಅವರ ಆರೋಗ್ಯ ಸ್ಥಿತಿಯ ಕುರಿತು ತಿಹಾರ್‌ನಿಂದ ಸ್ಥಿತಿ ವರದಿಯನ್ನು ಕೋರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ