ಮುಂಬೈನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 15 ಕ್ಕೆ ಏರಿಕೆ
ಇಲ್ಲಿ ಪಾರ್ಟಿಯೊಂದು ನಡೆಯುತ್ತಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದ್ದಾರೆ. ಹಾಗಾಗಿ ಮೃತರಲ್ಲಿ ಹೆಚ್ಚಿನವರು ಮಹಿಳೆಯರೇ ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.