ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದ ಬೆಂಬಲ: ಯೋಗಿ ಆದಿತ್ಯನಾಥ್

ಬುಧವಾರ, 31 ಮೇ 2017 (18:42 IST)
ರಾಮಜನ್ಮಭೂಮಿ ವಿವಾದವನ್ನು ಮಾತುಕತೆಯಿಂದ ಇತ್ಯರ್ಥಗೊಳಿಸಿ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಮುಸ್ಲಿಂ ಸಮುದಾಯದ ಸಂಘಟನೆಗಳು ಕೂಡಾ ರಾಮಮಂದಿರ ನಿರ್ಮಾಣದ ಪರವಾಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
 
ನಾವು ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ.ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಚರ್ಚೆ ನಡೆಯಬೇಕಾಗಿದೆ. ನಗರದಲ್ಲಿರುವ ಅನೇಕ ಮುಸ್ಲಿಂ ಸಂಘಟನೆಗಳು ರಾಮಜನ್ಮಭೂಮಿಯನ್ನು ಹಿಂದುಗಳಿಗೆ ನೀಡಲು ಮುಂದಾಗಿವೆ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂಚರ ಮೊದಲ ಬಾರಿಗೆ ವಿವಾದಿತ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಪಟ್ಟಣದ ಅಭಿವೃದ್ಧಿಗಾಗಿ 300 ಕೋಟಿ ರೂಪಾಯಿಗಳ ಅನುದಾನ ನೀಡುವುದಾಗಿ ಘೋಷಿಸಿದರು.
 
ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ನ್ಯಾಸ್ ನಿರ್ಮಾಣಕ್ಕಾಗಿ ಟ್ರಸ್ಟ್ ಸ್ಥಾಪಿಸಿದ್ದ ನೃತ್ಯ ಗೋಪಾಲ್ ದಾಸ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆಗೆ ಭೇಟಿ ನೀಡಿದವರಿಗೆ ಜೈ ಶ್ರೀರಾಮ್ ಎಂದು ಹೇಳುವುದನ್ನು ತಡೆಯಲು ಸಾಧ್ಯವಿಲ್ಲ ಎಂದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ