ಸಿಎಂ ಅಖಿಲೇಶ್ ಯಾದವ್‌ರನ್ನು ಬೆಂಬಲಿಸಿದ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ

ಸೋಮವಾರ, 24 ಅಕ್ಟೋಬರ್ 2016 (21:10 IST)
ಉತ್ತರಪ್ರದೇಶದ ಸಮಾಜವಾದಿ ಪಕ್ಷದಲ್ಲಿ ಎದುರಾಗಿರುವ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಸಿನ್ಹಾ, ತಾವು ಮುಖ್ಯಮಂತ್ರಿ ಅಖಿಲೇಶ್ ಪರವಾಗಿರುವುದಾಗಿ ಘೋಷಿಸಿದ್ದಾರೆ.
 
ಉತ್ಸಾಹಿ ಯುವ ಮುಖ್ಯಮಂತ್ರಿ ಅಖಿಲೇಶ್ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ರಾಜಕೀಯ ಬಿಕ್ಕಟ್ಟಿನಿಂದ ಹೊರಬರಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.
 
ಏತನ್ಮಧ್ಯೆ, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಸಿಂಗ್ ಯಾದವ್ ಬೆಂಬಲಿಗರ ನಡುವೆ ಪಕ್ಷದ ಕಚೇರಿಯ ಹೊರಗಡೆ  ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. 
 
ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್, ಪುತ್ರ ಅಖಿಲೇಶ್ ಮತ್ತು ,ಸಹೋದರ ಶಿವಪಾಲ್ ಯಾದವ್‌ ಮಧ್ಯೆ ಶಾಂತಿ ಸ್ಥಾಪಿಸಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ