ನನ್ನ ಫೋನ್ ಕದ್ದಾಲಿಕೆ: ಅಣ್ಣಾಮಲೈ

ಗುರುವಾರ, 10 ಫೆಬ್ರವರಿ 2022 (14:09 IST)
ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ರಾಜ್ಯ ಗುಪ್ತಚರ ವಿಭಾಗ ಕೆಲವು ದಿನಗಳಿಂದ ತಮ್ಮ ಫೋನ್ ಅನ್ನು ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ತಮ್ಮ ಕಚೇರಿಗೆ ನೀಡಲಾಗಿದ್ದ ರಕ್ಷಣೆಯನ್ನೂ ಕಡಿತಗೊಳಿಸಲಾಗಿದೆ. ವೈ-ಕೆಟಗರಿ ರಕ್ಷಣೆಯನ್ನು ಎಕ್ಸ್- ಕೆಟಗರಿಗೆ ಬದಲಾಯಿಸಲಾಗಿದೆ ಎಂದು ಹೇಳಿದರು.

ರಾಜ್ಯ ಗುಪ್ತಚರ ಇಲಾಖೆ ತಮಿಳುನಾಡು ಪೊಲೀಸರ ಮೇಲೆ ದರ್ಪ ತೋರಿಸುತ್ತಿದೆ. ಗುಪ್ತಚರ ವಿಭಾಗದ ಎಡಿಜಿಪಿ ಪೊಲೀಸ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಎಫ್‌ಐಆರ್ ದಾಖಲಿಸುವ ಮುನ್ನವೇ ತೀರ್ಮಾನ ತೆಗೆದುಕೊಂಡಿರುವುದು ಇದೇ ಮೊದಲು ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ