ಸಾರ್ವಜನಿಕ ಸ್ಥಳದಲ್ಲಿ ನಮಾಜ್ : 1,700 ಮುಖಂಡರ ವಿರುದ್ಧ ಕೇಸ್

ಶನಿವಾರ, 29 ಏಪ್ರಿಲ್ 2023 (12:58 IST)
ಲಕ್ನೋ: ಉತ್ತರ ಪ್ರದೇಶದ ಕಾಸ್ಪುರ ಹಾಗೂ ಅಲೀಗಢ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಅಲ್ವಿದಾ ಹಾಗೂ ಈದ್- ಉಲ್-ಫಿತ್ ಅಂಗವಾಗಿ ನಮಾಜ್ ಮಾಡಿದ 1,700 ಮಂದಿ ಅಪರಿಚಿತರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.
 
ನಿಷೇಧಾಜ್ಞೆ ನಡುವೆಯೂ ಏಪ್ರಿಲ್ 22ರಂದು ನಗರದ ಬೆನಜಬಾರ್ನಲ್ಲಿರುವ ಜಜ್ಮೌ ಈದ್ಗಾ, ಬಾಬುಪುರ್ವಾ ಈದ್ಗಾ ಮತ್ತು ಬದಿ ಈದ್ಗಾದ ಹೊರಭಾಗದ ರಸ್ತೆಯಲ್ಲಿ ನಮಾಜ್ ಮಾಡಲಾಗಿತ್ತು. ಹಾಗಾಗಿ ಜಜ್ಮೌ ಪೊಲೀಸ್ ಠಾಣೆಯಲ್ಲಿ 200, ಬೇಗಂಪುರವಾ ಪೊಲೀಸ್ ಠಾಣೆಯಲ್ಲಿ 40 ರಿಂದ 50 ಹಾಗೂ ಬೆನಜ್ಹಬರ್ ಪೊಲೀಸ್ ಠಾಣೆಯಲ್ಲಿ ಸುಮಾರು 1,500 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಈದ್ಗಾ ಸಮಿತಿ ಸದಸ್ಯರೂ ಸೇರಿದಂತೆ 1,700 ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 186 (ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವುದು), 188 (ಸೆಕ್ಷನ್ -144 ಉಲ್ಲಂಘಿಸಿ ಗುಂಪುಗೂಡುವುದು), 283 (ಜನಸಂದಣಿ ರಸ್ತೆ ತಡೆಯುವುದು), 341 (ಅಡಚಣೆ ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕ ಓಂವೀರ್ ಸಿಂಗ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ