ಮೂರನೇ ಬಾರಿ ಎನ್‌ಡಿಎ ನಾಯಕರಾದ ನರೇಂದ್ರ ಮೋದಿ

sampriya

ಬುಧವಾರ, 5 ಜೂನ್ 2024 (20:44 IST)
Photo By X
ದೆಹಲಿ: ನವದೆಹಲಿಯಲ್ಲಿ ಇಂದು ನಡೆದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಎನ್‌ಡಿಎ ನಾಯಕನಾಗಿ ಆಯ್ಕೆಮಾಡಲಾಯಿತು. ಇನ್ನೂ ಸಭೆಯಲ್ಲಿ  ಸರ್ಕಾರ ಸರ್ಕಾರ ರಚನೆ ಬಗ್ಗೆ ನಾಯಕರು ಚರ್ಚಿಸಿದ್ದಾರೆ.

ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡ ಬೆನ್ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಮಿತ್ರ ಪಕ್ಷಗಳ ಪಾತ್ರವು ಮುಖ್ಯವಾಗಿದ್ದು  ಸಭೆಯಲ್ಲಿ ಎಲ್ಲ ಪಕ್ಷಗಳು ಬೆಂಬಲ ಪತ್ರಗಳನ್ನು ನೀಡಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಲಾಗುತ್ತದೆ. ಇನ್ನೂ  ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಜೆಡಿಯು, ಟಿಡಿಪಿ, ಶಿವಸೇನೆ ಹಾಗೂ ಎಲ್‌ಜೆಪಿ ಪಕ್ಷಗಳ ಪಾತ್ರ ನಿರ್ಣಾಯಕವಾಗಿರುವ ಕಾರಣ ಆಯಾ ಪಕ್ಷಗಳ ನಾಯಕರು ಮಹತ್ವದ ಖಾತೆ, ಹುದ್ದೆ ಸೇರಿ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸಿದ ಎಚ್‌ ಡಿ ಕುಮಾರಸ್ವಾಮಿ ಅವರು ಕೂಡ  ಮೋದಿ ಸಂಪುಟದಲ್ಲಿ ಬೇಡಿಕೆ ಇಟ್ಟಿರುವ ಸಾಧ್ಯತೆಯಿದೆ.

ಇನ್ನೂ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜಿಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಬಿಜೆಪಿಯ ನಾಯಕರು ಹಾಜರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ