ವಾಸ್ತವವಾಗಿ ಹೇಳಬೇಕೆಂದರೆ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ರಕ್ಷಿಸುತ್ತಿರುವುದು ನರೇಂದ್ರ ಮೋದಿ ಸರ್ಕಾರ. ಸಿಬಿಐ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದರೂ ಸಹ ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಭಾಗಿಯಾಗಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯನ್ನು ಮೋದಿ ಸರ್ಕಾರ ರಕ್ಷಿಸುತ್ತಿರುವುದೇಕೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.