ದೇವೇಗೌಡರ ಆರೋಗ್ಯ ವಿಚಾರಿಸಿದ ನರೇಂದ್ರ ಮೋದಿ: ನಾನು ಅಭಾರಿ ಎಂದ ಮಾಜಿ ಪ್ರಧಾನಿ

Sampriya

ಮಂಗಳವಾರ, 11 ಜೂನ್ 2024 (15:34 IST)
ಬೆಂಗಳೂರು: ಮಾಜಿ ಪ್ರಧಾನಿ ಎಚ್.​ಡಿ ದೇವೇಗೌಡ ಅವರು ಅನಾರೋಗ್ಯ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಈ ಬೆನ್ನಲ್ಲೇ ಮೋದಿ ಅವರು ದೇವೇಗೌಡ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಎಚ್.​ಡಿ ದೇವೇಗೌಡ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಕಾಳಜಿಗೆ ನಾನು ಆಭಾರಿ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ದೇವರ ಆಶೀರ್ವಾದ ಸದಾ ಅವರ ಮೇಲೆ ಇರಲಿ. ಅವರು ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ದೇವೇಗೌಡ ಅವರು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮವನ್ನು ಇದೊಂದು ಐತಿಹಾಸಿಕ ಕ್ಷಣ. ನಾನು ಕೂಡ ಸಮಾರಂಭದಲ್ಲಿ ಹಾಜರಿರಬೇಕಿತ್ತು. ಅನಾರೋಗ್ಯದ ಕಾರಣದಿಂದ ಅದು ಸಾಧ್ಯವಾಗುತ್ತಿಲ್ಲ. ನಮ್ಮ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಎಲ್ಲರೊಂದಿಗೆ ಎಲ್ಲರ ವಿಕಾಸ ಎಂಬ ಘೋಷ ವಾಕ್ಯದಂತೆ ನಿಮ್ಮೊಂದಿಗೆ ಕೆಲಸ ಮಾಡುತ್ತೇವೆ ಎಂದು ದೇವೇಗೌಡ ಅವರು ಎಕ್ಸ್‌ನಲ್ಲಿ ತಿಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ