ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ: ಮೋದಿಯ ಮೊದಲ ಆರ್ಡರ್ ಏನು

Krishnaveni K

ಸೋಮವಾರ, 10 ಜೂನ್ 2024 (12:55 IST)
Photo Credit: X
ನವದೆಹಲಿ: ನಿನ್ನೆಯಷ್ಟೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಇಂದು ಪ್ರಧಾನಿ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ್ದಾರೆ. ಇದರ ಜೊತೆಗೆ ಮೊದಲ ಆದೇಶಕ್ಕೆ ಸಹಿ ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಇದು ಮೂರನೇ ಅವಧಿಯಾಗಿದೆ. ನೆಹರೂ ನಂತರ ಈ ಸಾಧನೆ ಮಾಡುತ್ತಿರುವ ಮತೊಬ್ಬ ವ್ಯಕ್ತಿ ಎಂಬ ಹೆಗ್ಗಳಿಕೆ ಅವರದ್ದಾಗಿದೆ. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ತಕ್ಷಣವೇ ಪಿಎಂ ಕಿಸಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ.

ಇಂದು ಸಂಜೆ 5 ಗಂಟೆಗೆ ಪ್ರಧಾನಿ ತಮ್ಮ ನೂತನ ಸಚಿವರೊಂದಿಗೆ ಸಂಪುಟ ಸಭೆ ನಡೆಸಲಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯಲಿರುವ ಮೊದಲ ಸಭೆ ಇದಾಗಲಿದೆ. ಈ ಸಭೆಯಲ್ಲಿ ನೂತನ ಎನ್ ಡಿಎ ಸರ್ಕಾರ ಕೈಗೊಳ್ಳಲಿರುವ 100 ದಿನಗಳ ಯೋಜನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ 71 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಕೆಲವು ಹೊಸ ಮುಖಗಳಿಗೂ ಮಣೆ ಹಾಕಲಾಗಿದೆ. ಇಂದು ಎಲ್ಲಾ ಸಚಿವರೊಂದಿಗೆ ಮೋದಿ ಸಭೆ ನಡೆಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ