ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ನರೇಂದ್ರ ಮೋದಿ
ಯುಎಸ್ ಅಧ್ಯಕ್ಷ ಜೋ ಬೈಡೆನ್, ಇಸ್ರೇಲ್ ಪಿಎಂ ಯೈರ್ ಲ್ಯಾಪಿಡ್ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಒಕ್ಕೂಟದ ಚೌಕಟ್ಟಿನಡಿಯಲ್ಲಿ ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಜಂಟಿ ಆರ್ಥಿಕ ಯೋಜನೆಗಳ ಕುರಿತು ಈ ನಾಯಕರು ಚರ್ಚಿಸುವ ನಿರೀಕ್ಷೆಯಿದೆ.
ಉಕ್ರೇನ್ ಸಂಘರ್ಷದಿಂದ ಉಂಟಾಗುವ ಜಾಗತಿಕ ಆಹಾರ ಮತ್ತು ಇಂಧನ ಬಿಕ್ಕಟ್ಟು ಕುರಿತು ಮಾತುಕತೆ ನಡೆಯಲಿದೆ. ಈ ಸಭೆಯು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. 2021ರಲ್ಲಿ I2U2 ಅಸ್ತಿತ್ವಕ್ಕೆ ಬಂದಿದೆ.