ಮಾಜಿ ಪ್ರಧಾನಿ ರಾಜೀವ್ ಗಾಂಧಿ 25ನೇ ಪುಣ್ಯತಿಥಿ: ಸೋನಿಯಾ , ರಾಹುಲ್‌ರಿಂದ ಶೃದ್ಧಾಂಜಲಿ

ಶನಿವಾರ, 21 ಮೇ 2016 (12:13 IST)
ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 25ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಜೊತೆಗೆ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ಅಳಿಯ ರಾಬರ್ಟ್ ವಾದ್ರಾ ರಾಜೀವ್ ಅವರ ಸಮಾಧಿಗೆ ಪುಷ್ಪಾರ್ಚನೆಗೈದರು. 
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅನೇಕ ಕಾಂಗ್ರೆಸ್ ನಾಯಕರು ಕೂಡಾ ಶ್ರದ್ಧಾಂಜಲಿ ಸಲ್ಲಿಸಿದರು. 
 
ದೇಶದ ಆರನೇ ಹಾಗೂ ಅತಿ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅವರನ್ನು 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಹತ್ಯೆ ಮಾಡಲಾಗಿತ್ತು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ