ಒಂದು ಹೊತ್ತಿನ ಊಟ ಬಿಡಿ- ಬಿಜೆಪಿ ಕಾರ್ಯಕರ್ತರಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಲಹೆ
ಸೋಮವಾರ, 6 ಏಪ್ರಿಲ್ 2020 (11:18 IST)
ನವದೆಹಲಿ : ಲಾಕ್ ಡೌನ್ ಹಿನ್ನಲೆ ಒಂದು ಹೊತ್ತಿನ ಊಟ ಬಿಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಕಾರ್ಯಕರ್ತರಿಗೆ ಸಲಹೆಯನ್ನು ನೀಡಿದ್ದಾರೆ.
ಕೊರೊನಾ ತಡೆಗಟ್ಟಲು ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಒಂದು ಹೊತ್ತಿನ ಊಟ ಬಿಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಹಾಗೇ ಜೆಪಿ ನಡ್ಡಾ ಅವರ ಸಲಹೆಯನ್ನು ಪಾಲಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಹಾಗೇ ಇಂದು ಬಿಜೆಪಿ ಸಂಸ್ಥಾಪನಾ ದಿನವಾದ ಹಿನ್ನಲೆಯಲ್ಲಿ ಪಕ್ಷದ ಕಚೇರಿ ಹಾಗೂ ಕಾರ್ಯಕರ್ತರ ಮನೆ ಮೇಲೆ ಬಾವುಟ ಹಾರಿಸಿ. ಬಾವುಟ ಹಾರಿಸುವಾಗ ದೈಹಿಕ ಅಂತರ ಕಾಪಾಡಿಕೊಳ್ಳಿ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.