ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್

ಬುಧವಾರ, 23 ಅಕ್ಟೋಬರ್ 2019 (06:45 IST)
ಚಂಡೀಗಢ : ಚಂಡೀಗಢ ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.




ಪೂರ್ವ ಅಮೃತಸರದ ಮಾಜಿ ಶಾಸಕಿ ಹಾಗೂ ಮಾಜಿ ಸಂಸದೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೌರ್ ಅವರು ಚಂಡೀಗಢ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಚಂಡೀಗಢ ಲೋಕಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿತ್ತು.


ಈ ಹಿನ್ನಲೆಯಲ್ಲಿ ಬೇಸರಗೊಂಡ ನವಜೋತ್ ಕೌರ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಆಶಾ ಕುಮಾರಿ ಅವರಿಂದಾಗಿ ಚಂಡೀಗಢ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ