ಕಾಂಗ್ರೆಸ್ ಸಿಎಂ ಅಭ್ಯರ್ಥಿ ಆಸೆಗಾಗಿ ಆಪ್‌ನ ಡಿಸಿಎಂ ಆಫರ್ ತಿರಸ್ಕರಿಸಿದ ಸಿದ್ದು: ಕೇಜ್ರಿವಾಲ್

ಶನಿವಾರ, 31 ಡಿಸೆಂಬರ್ 2016 (12:36 IST)
ಮುಖ್ಯಮಂತ್ರಿ ಅಭ್ಯರ್ಥಿಯಾಗಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಭರವಸೆಯನ್ನು ನಂಬಿ ಆಪ್ ಪಕ್ಷದ ಡಿಸಿಎಂ ಅಭ್ಯರ್ಥಿ ಆಹ್ವಾನವನ್ನು ಬಿಜೆಪಿ ಮಾಜಿ ಸಂಸದ ನವಜೋತ್ ಸಿಂಗ್ ಸಿದ್ಧು ತಿರಸ್ಕರಿಸಿದರು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
 
ಆಮ್ ಆದ್ಮಿ ಪಕ್ಷದ ಉಪ ಮುಖ್ಯಮಂತ್ರಿ ಅಭ್ಯರ್ಥಿಯಾಗಿಸುವುದಾಗಿ ನಾವು ಆಹ್ವಾನ ನೀಡಿದ್ದೇವು ಎಂದು ತಿಳಿಸಿದ್ದಾರೆ.
 
ಇದೀಗ ನವಜೋತ್ ಸಿಂಗ್ ಸಿದ್ದು ಇದೀಗ ಕಾಂಗ್ರೆಸ್ ಪಕ್ಷದ ಅಘೋಷಿತ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ ಎನ್ನುವುದು ಪ್ರತಿಯೊಬ್ಬರಿಗೆ ಗೊತ್ತಿದೆ. ಅದಕ್ಕಾಗಿ ಆಪ್ ಪಕ್ಷದ ಆಹ್ವಾನ ತಿರಸ್ಕರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದ ಅಭ್ಯರ್ಥಿಯಂತಲ್ಲ. ನಮ್ಮ ಪಕ್ಷದ ಸಿಎಂ ಅಭ್ಯರ್ಥಿ ಬೆಳಿಗ್ಗೆ 11 ಗಂಟೆಗೆ ನಿದ್ರೆಯಿಂದ ಏಳುವುದಿಲ್ಲ. ಬದಲಿಗೆ 5-6 ಗಂಟೆಗೆ ಎದ್ದು ರಾತ್ರಿ 10 ಗಂಟೆಯವರಿಗೆ ಕಾರ್ಯನಿರ್ವಹಿಸುತ್ತಾರೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದರು.
 
ನಮ್ಮ ಪಕ್ಷದ ಸಿಎಂ ಅಭ್ಯರ್ಥಿಗೆ ಸ್ವಿಸ್ ಬ್ಯಾಂಕ್‌‌ನಲ್ಲಿ ಖಾತೆಯಿಲ್ಲ. ಅದರ ಬದಲಿಗೆ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಖಾತೆಯಿದೆ. ಆದರೆ, ಸೂಕ್ತ ಸಮಯದಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
 
ಪಂಜಾಬ್ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಕೇಜ್ರಿವಾಲ್, ಡೇರಾ ಬಾಬಾ ನಾನಕ್ ಮತ್ತು ಖಡಿಯಾನ್ ನಗರಗಳಲ್ಲಿ ಪಕ್ಷದ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ