ರಾಜೀನಾಮೆ ಹಿಂಪಡೆಯುವ ಸುಳಿವು ನೀಡಿದ ನವಜೋತ್ ಸಿಂಗ್ ಸಿಧು

ಶನಿವಾರ, 16 ಅಕ್ಟೋಬರ್ 2021 (13:02 IST)
ನವದೆಹಲಿ : ಪಂಜಾಬ್​ನ ಭವಿಷ್ಯ ಮತ್ತು ಅಭಿವೃದ್ಧಿ ವಿಷಯದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂಬ ಕಾರಣ ನೀಡಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಸೆ. 28ರಂದು ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು.
 
Photo Courtesy: Google

ಅದಾದ ಬಳಿಕ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಂಜಾಬ್ ಸಿಎಂ ಚರಣ್ನಿತ್ ಸಿಂಗ್ ಚನ್ನಿ ಇನ್ನೂ ಹಲವು ಕಾಂಗ್ರೆಸ್ ನಾಯಕರು ನವಜೋತ್ ಸಿಂಗ್ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ನಾನು ರಾಜೀನಾಮೆಯಿಂದ ಹಿಂದೆ ಸರಿಯುವುದಿಲ್ಲ ಎಂದೇ ಹೇಳಿಕೆ ನೀಡಿದ್ದ ಸಿಧು ಇಂದು ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದು ನಿನ್ನೆ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ