ಹರಿಯಾಣದ ಸಿಎಂ ಆಗಿ ನಯಾಬ್‌ ಸಿಂಗ್ ಸೈನಿ ಪ್ರಮಾಣ ಸ್ವೀಕಾರ: ಪ್ರಧಾನಿ ಸೇರಿ ಗಣ್ಯರು ಭಾಗಿ

Sampriya

ಗುರುವಾರ, 17 ಅಕ್ಟೋಬರ್ 2024 (15:45 IST)
‍photo credit X
ಚಂಢೀಗಢ: ನಯಾಬ್ ಸಿಂಗ್ ಸೈನಿ ಅವರು ಸತತ ಎರಡನೇ ಬಾರಿ ಇಂದು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿಯವರಿಗೆ ಪ್ರಮಾಣ ವಚನ ಬೋಧಿಸಿದರು. ಪಂಚಕುಲದ ದಸರಾ ಮೈದಾನದಲ್ಲಿ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

90 ಸದಸ್ಯಬಲದ ಹರಿಯಾಣದ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆದಿತ್ತು. ಅಕ್ಟೋಬರ್ 8ರಂದು ನಡೆದ ಮತ ಎಣಿಕೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಬಿಜೆಪಿ ಶಾಸಾಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಸೈನಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ