ಕಾಂಗ್ರೆಸ್, ಎನ್‌ಸಿಪಿ ಸೋಲಿಗೆ ಮಾಜಿ ಮುಖ್ಯಮಂತ್ರಿ ಪ್ರಥ್ವಿರಾಜ್ ಚೌಹಾಣ್ ಹೊಣೆ

ಭಾನುವಾರ, 19 ಅಕ್ಟೋಬರ್ 2014 (12:33 IST)
ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಎನ್‌ಸಿಪಿ ನಾಯಕರ ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ಮುಖ್ಯಮಂತ್ರಿ ಪ್ರಥ್ವಿರಾಜ್ ಚೌಹಾಣ್ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳ ಹಿನ್ನೆಡೆಗೆ ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮೈತ್ರಿಪಕ್ಷಗಳು ಆರೋಪಿಸಿವೆ.  
 
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾದ ಚೌಹಾ್ ಅವರ ವರ್ತನೆಯಿಂದ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಸೋಲನುಭವಿಸಿದ್ದು, ಬಿಜೆಪಿ ಮುನ್ನಡೆಯಾಗಲು ಕಾರಣವಾಗಿದೆ ಎಂದು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಕಿಡಿಕಾರಿದ್ದಾರೆ.
 
ಮಹಾರಾಷ್ಟ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸಿಎಂ ಚೌಹಾಣ್‌ಗೆ ತಿಳುವಳಿಕೆಯಿಲ್ಲ. ಸೂಕ್ತ ಸೂಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿಲ್ಲ. ಜನಪರ ಕಾರ್ಯಗಳಿಗೆ ಸ್ಪಂದಿಸದಿರುವುದೇ ಉಭಯ ಪಕ್ಷಗಳ ಸೋಲಿಗೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಕಳೆದ 15 ವರ್ಷಗಳಿಂದ ಮೈತ್ರಿಯನ್ನು ಹೊಂದಿದ್ದವು. ಆದರೆ, ಚುನಾವಣೆಗೆ ಕೆಲ ದಿನಗಳ ಹಿಂದಷ್ಟೆ ಮೈತ್ರಿ ಕಡಿದುಕೊಂಡಿದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.

ವೆಬ್ದುನಿಯಾವನ್ನು ಓದಿ