ಇಸ್ಲಾಮಿಕ್ ಭಯೋತ್ಪಾದನೆ ನಿರ್ಮೂಲನೆ ಅಗತ್ಯವಾಗಿದೆ: ಸ್ವಾಮಿ

ಸೋಮವಾರ, 21 ನವೆಂಬರ್ 2016 (14:05 IST)
ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಯನ್ನು ಬೇರುಮಟ್ಟದಿಂದ ಕಿತ್ತುಹಾಕಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
 
ಇಸ್ಲಾಮಿಕ್ ಭಯೋತ್ಪಾದನೆ ದೇಶದಲ್ಲಿ ಸಮುದಾಯಗಳನ್ನು ಒಡೆದು ಅಶಾಂತಿ, ಅರಾಜಕತೆ ಉಂಟು ಮಾಡಲು ಪ್ರಯತ್ನಿಸುತ್ತಿದೆ. ನಾವು ಎಲ್‌ಟಿಟಿಇ, ತಮಿಳು ಟೈಗರ್ಸ್, ಬುಡೋ, ನಕ್ಸಲ್ಸ್‌ಗಳೊಂದಿಗೆ ಯಶಸ್ವಿಯಾಗಿ ಹೋರಾಟ ಮಾಡುತ್ತಿದ್ದೇವೆ. ಅದರಂತೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
 
ದೇಶದಲ್ಲಿ ಭಯೋತ್ಪಾದನೆ ಎನ್ನುವ ವಿಷಯ ಕುರಿತಂತೆ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಇಸ್ಲಾಮಿಕ್ ಸ್ಟೇಟ್ ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿದೆ. ನಿರ್ಧಿಷ್ಠ ಕಾನೂನು ಜಾರಿಗೊಳಿಸಿ ಅದನ್ನು ಹತ್ತಿಕ್ಕಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
 
ಮಾಜಿ ಪ್ರಧಾನಿ ಚಂದ್ರಶೇಖರ್ ಪ್ರಧಾನಿಯಾಗಿದ್ದಾಗ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಭಾರತ್ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಕೋರಿದ್ದೆ. ಆದರೆ, ಕಾಂಗ್ರೆಸ್ ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ