ನವದೆಹಲಿ: ದೇಶದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಇಬ್ಬರನ್ನು ಬಂಧಿಸಿದ್ದು, ಇದು ಪ್ರಕರಣದ ಮೊದಲ ಬಂಧನವಾಗಿದೆ.
ಪ್ರಕರಣ ಸಂಬಂಧ ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಸಿಬಿಐ ಬಂಧಿಸಿದೆ.
ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಆರೋಪಿಗಳು ಪರೀಕ್ಷೆಯ ಮೊದಲು ಆಕಾಂಕ್ಷಿಗಳಿಗೆ ಸುರಕ್ಷಿತ ಆವರಣವನ್ನು ಒದಗಿಸಿ ಅವರಿಗೆ ಸೋರಿಕೆಯಾದ ಪತ್ರಿಕೆಗಳು ಮತ್ತು ಉತ್ತರ ಕೀಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಹೆಚ್ಚಿನ ಪೊಲೀಸ್ ಕಸ್ಟಡಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.