ನೇತಾಜಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಮಂಗಳವಾರ, 13 ಅಕ್ಟೋಬರ್ 2015 (21:07 IST)
ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಭೋಸ್ ಕುಟುಂಬದ ಸದಸ್ಯರು ಬುಧವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದು, 70 ವರ್ಷಗಳ ಹಿಂದೆ ಕಾಣೆಯಾದ ನೇತಾಜಿಯವರಿಗೆ ಸಂಬಂಧಿಸಿದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ಕಚೇರಿಯಲ್ಲಿ ಅಕ್ಟೋಬರ್ 14 ರಂದು ನೇತಾಜಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
 
ಕಳೆದ ತಿಂಗಳು ಪ್ರಧಾನಿ ಮೋದಿ ನಡೆಸಿದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 50 ಸದಸ್ಯರ ನೇತಾಜಿ ಕುಟುಂಬವನ್ನು ತಮ್ಮ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡುವುದಾಗಿ ತಿಳಿಸಿದ್ದರು.
 
ಹಲವು ದೇಶಗಳಲ್ಲಿ ನೆಲೆಸಿರುವ ನೇತಾಜಿ ಕುಟುಂಬದ 50 ಸದಸ್ಯರು ಭೇಟಿ ಮೀಡಲು ಆಗಮಿಸುತ್ತಿರುವುದು ಸಂತಸ ತಂದಿದೆ ಎಂದು ಮೋದಿ ಹೇಳಿದ್ದಾರೆ.
 
ನೇತಾಜಿ ಕುಟುಂಬದ ಎಲ್ಲಾ ಸದಸ್ಯರು ಒಂದಾಗಿ ಮೊದಲ ಬಾರಿಗೆ ಪ್ರದಾನಿ ಕಚೇರಿಗೆ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಇದೊಂದು ಮಹತ್ವದ ಗಳಿಗೆ ಎಂದು ಬಣ್ಣಿಸಿದ್ದಾರೆ.  
 
ಆದರೆ, ಅದಕ್ಕಿಂತ ಹೆಚ್ಚಿನ ಸಂತಸವೆಂದರೆ ಪ್ರಧಾನಮಂತ್ರಿ ಕಚೇರಿಯಲ್ಲಿ  ನೇತಾಜಿ ಕುಟುಂಬದ ಸದಸ್ಯರನ್ನು ಭೇಟಿ ಮಾಡುವ ಅವಕಾಶ ನನ್ನದಾಗಿರುವುದು ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ