ನವದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣ: 33ಸಂತ್ರಸ್ತ ಕುಟುಂಬಗಳಿಗೆ ₹2ಕೋಟಿ ಘೋಷಣೆ
ಫೆಬ್ರವರಿ 15 ರ ಪ್ರಯಾಗ್‌ನಲ್ಲಿ ನಡೆದ ಕುಂಭಮೇಳದಲ್ಲಿ ಪಾಲ್ಗೊಳ್ಳುವ ಸಲುವಾಗಿ ನವದೆಹಲಿ ರೈಲು ನಿಲ್ದಾಣದಲ್ಲಿ ಅಪಾರ ಭಕ್ತರು ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿತು.
ವೈಷ್ಣವ್ ಅವರು ಮೃತರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ನೀಡಲಿಲ್ಲ, ಆದರೆ ಘಟನೆಯ ಅಧಿಕಾರಿಗಳು ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವೈಷ್ಣವ್ ಹೇಳಿದರು.