ರೈತರಿಂದ ನವ ಭಾರತವು ಹೆಚ್ಚು ಸಮೃದ್ಧವಾಗುತ್ತೆ: ನರೇಂದ್ರ ಮೋದಿ

ಭಾನುವಾರ, 10 ಏಪ್ರಿಲ್ 2022 (16:03 IST)
ನವದೆಹಲಿ : ರೈತರು ಎಷ್ಟು ಬಲಿಷ್ಠರಾಗುತ್ತಾ ಹೋಗುತ್ತಾರೋ, ಹಾಗೇ ನವ ಭಾರತವು ಹೆಚ್ಚು ಸಮೃದ್ಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಇತರೆ ಕೃಷಿ ಸಂಬಂಧಿತ ಯೋಜನೆಗಳ ಕುರಿತು ಟ್ವೀಟ್ ಮಾಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಇತರ ಕೃಷಿ ಸಂಬಂಧಿತ ಯೋಜನೆಗಳು ಕೋಟಿಗಟ್ಟಲೆ ಉಳುಮೆದಾರರಿಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದು ಟ್ವೀಟ್ನಲ್ಲಿ ಮಾಹಿತಿ ನೀಡಿದರು.

ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ದೇಶ ಹೆಮ್ಮೆಪಡುತ್ತದೆ. ಅವರು ಬಲಿಷ್ಠರಾಗಿದಷ್ಟು, ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ನನಗೆ ಖುಷಿ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ