ಇರುವೆ ಕಡಿತಕ್ಕೆ ಮೂರು ದಿನ ಮಗು ಆಸ್ಪತ್ರೆಯಲ್ಲೇ ಸಾವು
ಉತ್ತರ ಪ್ರದೇಶದ ಮಹಬೂಬಾ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನದ ಮಗುವೊಂದು ಇರುವೆ ಕಡಿತಕ್ಕೊಳಗಾಗಿ ಸಾವನ್ನಪ್ಪಿದೆ. ಇದೀಗ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಪೋಷಕರು, ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಆಸ್ಪತ್ರೆಯ ವಾರ್ಡ್ ನಲ್ಲಿ ವಿಪರೀತ ಕೊಳೆ, ಇರುವೆಯಿತ್ತು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಹೇಳಿದರೂ ಕ್ಯಾರೇ ಎಂದಿರಲಿಲ್ಲ. ಇದೀಗ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ದೂರು ದಾಖಲಿಸಿದ್ದಾರೆ.