ತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲಕ್ಕೆ ದಂಡ ವಿಧಿಸಿದ ಎನ್‍ಜಿಟಿ
ಭಾನುವಾರ, 16 ಅಕ್ಟೋಬರ್ 2022 (15:04 IST)
ನವದೆಹಲಿ : ಬೆಂಗಳೂರಿನಲ್ಲಿ ಮಳೆ ಪ್ರವಾಹ ಪರಿಸ್ಥಿತಿ ಸುಧಾರಿಸದ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದುಬಾರಿ ದಂಡ ವಿಧಿಸಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎನ್ಜಿಟಿ ಒಟ್ಟು 3,400 ಕೋಟಿ ಪರಿಸರ ಪರಿಹಾರ ನೀಡಲು ಸೂಚಿಸಿದೆ. ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಮುಳುಗಡೆಯಾಗಿದ್ದವು ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು,
ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ದೂರು ದಾಖಲಿಸಿಕೊಂಡಿದ್ದ ಎನ್ಜಿಟಿ ಈ ಬಗ್ಗೆ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಹೊಸೂರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೂ ಮಳೆ ನೀರಿನಿಂದ ಸಮಸ್ಯೆ ಸೃಷ್ಟಿಯಾಗಿದೆ.
ಮತ್ತೊಂದು ಪ್ರಕರಣದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕ ಸರ್ಕಾರ ವಿಫಲ ಹಿನ್ನೆಲೆ 2,900 ಕೋಟಿ ರೂ ದಂಡ (ಪರಿಸರ ಪರಿಹಾರ) ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಧಿಕರಣ ಆದೇಶ ಮಾಡಿದೆ. ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ ಈ ಆದೇಶ ನೀಡಿದೆ.