ನಿರ್ಭಯಾ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಗಲ್ಲು

ಶುಕ್ರವಾರ, 20 ಮಾರ್ಚ್ 2020 (06:41 IST)
ನವದೆಹಲಿ: ನಿರ್ಭಯಾ ಹಂತಕರಿಗೆ ಇಂದು (ಶುಕ್ರವಾರ) ಬೆಳಿಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. 2012ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ಸಿಕ್ಕಿದೆ.

ಅಪರಾಧಿಗಳಾದ ಅಕ್ಷಯ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ, ಮುಕೇಶ್ ಸಿಂಗ್ ಗೆ ಇಂದು ಬೆಳಿಗ್ಗೆ 5.30ಕ್ಕೆ ಮರಣದಂಡನೆ ಜಾರಿಗೊಳಿಸಲಾಗಿದೆ.ಹ್ಯಾಂಗ್ ಮನ್ ಪವನ್ ಅವರು ಅಪರಾಧಿಗಳನ್ನು  ಗೆಲ್ಲಿಗೇರಿಸಿದ್ದಾರೆ.

ದೆಹಲಿಯ ತಿಹಾರ್ ಜೈಲಿನ ವಧಾಸ್ಥಳದಲ್ಲಿ ನಾಲ್ವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ. ಮೂಲಕ  ಏಳು ವರ್ಷಗಳ ಬಳಿಕೆ ನಿರ್ಭಯಾ ಪ್ರಕರಣಕ್ಕೆ ನ್ಯಾಯ ಸಿಕ್ಕಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ