ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಇಂದು ಪ್ರಕಟ?
ಫೆಬ್ರವರಿ 1 ರಂದೇ ಈ ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆ ಜಾರಿಯಾಗಬೇಕಿತ್ತು. ಆದರೆ ಅಪರಾಧಿಗಳಿಗೆ ಕೊನೆಯದಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಅವಕಾಶವಿದ್ದಿದ್ದರಿಂದ ಶಿಕ್ಷೆ ಜಾರಿ ಮುಂದೂಡಲಾಯಿತು. ಆದರೆ ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆಗೆ ತಡೆ ನೀಡಿದ್ದ ದೆಹಲಿ ಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.