ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ
ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.
ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಗಡ್ಕರಿ ಹೇಳಿದರು.