ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ನಿತಿನ್ ಗಡ್ಕರಿ

Krishnaveni K

ಶನಿವಾರ, 2 ಮಾರ್ಚ್ 2024 (14:31 IST)
ನವದೆಹಲಿ: ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈ ರಾಮ್ ರಮೇಶ್ ಗೆ ಕೇಂದ್ರ ಸಚಿವನ ನಿತಿನ್ ಗಡ್ಕರಿ ಲೀಗಲ್ ನೋಟಿಸ್ ನೀಡಿದ್ದಾರೆ. ತಪ್ಪು ಸಂದೇಶ ನೀಡುವ ವಿಡಿಯೋ ಪ್ರಕಟಿಸಿದ್ದಕ್ಕಾಗಿ ನೋಟಿಸ್ ನೀಡಲಾಗಿದೆ.

ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಖರ್ಗೆ ಮತ್ತು ಜೈರಾಮ್ ರಮೇಶ್ ನಿತಿನ್ ಗಡ್ಕರಿ ಬಗ್ಗೆ ತಪ್ಪು ಮಾಹಿತಿ ನೀಡುವ ಸಂದರ್ಶನವೊಂದರ ವಿಡಿಯೋ ಕ್ಲಿಪ್ ಒಂದನ್ನು ಪ್ರಕಟಿಸಿದ್ದರು. ಈ ಕಾರಣಕ್ಕೆ ಇಬ್ಬರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಗಡ್ಕರಿ ಪರ ವಕೀಲರು, ತಮ್ಮ ಬಗ್ಗೆ ತಪ್ಪು ಸಂದೇಶ ರವಾನಿಸುವ ವಿಡಿಯೋ ನೋಡಿ ಗಡ್ಕರಿಯವರಿಗೆ ಶಾಕ್ ಆಗಿದೆ. ವೆಬ್ ಸೈಟ್ ಒಂದರ ಸಂದರ್ಶನದ ಸುಮಾರು 19 ಸೆಕೆಂಡುಗಳ ವಿಡಿಯೋ ಇದಾಗಿದೆ. ಈ ವಿಡಿಯೋ ತಪ್ಪು ಸಂದೇಶ ಮತ್ತು ತಪ್ಪು ದಾರಿಗೆಳೆಯುವಂತಿದೆ. ಇದನ್ನು ತಕ್ಷಣವೇ ಡಿಲೀಟ್ ಮಾಡಬೇಕೆಂದು ಲೀಗಲ್ ನೋಟಿಸ್ ನಲ್ಲಿ ಸೂಚಿಸಲಾಗಿದೆ.

ಈ ವಿಡಿಯೋದಲ್ಲಿ ನಿತಿನ್ ಗಡ್ಕರಿ ಮತ್ತು ಪ್ರಧಾನಿ ಮೋದಿ ನಡುವೆ ವೈಮನಸ್ಯವಿರುವಂತೆ  ಚಿತ್ರಿಸಲಾಗಿದೆ. ಇದು ಬಿಜೆಪಿಯಲ್ಲಿ ಒಡಕು ಮೂಡಿಸುವ ಸಂಭವವಿದ್ದು, ಹೀಗಾಗಿ ನಿತಿನ್ ಗಡ್ಕರಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ತಕ್ಷಣವೇ ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಿಂದು ಈ ವಿಡಿಯೋಗಳನ್ನು ಡಿಲೀಟ್ ಮಾಡಬೇಕು. ಇಲ್ಲದೇ ಹೋದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ