ಬಿಹಾರ ವಿಧಾನಸಭೆ ವಿಸರ್ಜನೆಗೆ ಸಿದ್ಧ

ಶನಿವಾರ, 14 ನವೆಂಬರ್ 2015 (16:02 IST)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸಲು ಮನವಿ ಮಾಡಿಕೊಂಡಿದ್ದಾರೆ.

 
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸಲು ಮನವಿ ಮಾಡಿಕೊಂಡಿದ್ದಾರೆ.
 
ನಿತೀಶ್ ಕುಮಾರ್, ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ನವನ್ನು ಸಲ್ಲಿಸಿದ್ದಾರೆ ಮತ್ತು ಸಂಪುಟದ ನಿರ್ಧಾರವನ್ನು ಅವರಿಗೆ ತಿಳಿಸಿದ್ದಾರೆ", ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜೀನಾಮೆಯನ್ನು ಸ್ವೀಕರಿಸಿರುವ ರಾಜ್ಯಪಾಲರು, ಮುಂದಿನ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ನಿತೀಶ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮಹಾಮೈತ್ರಿಕೂಟದ ನೇತೃತ್ವ ವಹಿಸಿದ್ದ ನಿತೀಶ್ ಕುಮಾರ್ ಅವರ ಜೆಡಿಯು, ಮಿತ್ರ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಸಭೆ ನಡೆಸಿದ ಬಳಿಕ ನೂತನ ಸರ್ಕಾರವನ್ನು ರಚಿಸುವ ಪ್ರಸ್ತಾವನೆಯನ್ನು ಮುಂದಿಡಲಿದ್ದಾರೆ.
 
ಹೊಸದಾಗಿ ಆಯ್ಕೆಯಾಗಿರುವ ಜೆಡಿ-ಯು ಶಾಸಕರು ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಿದ್ದಾರೆ. ಬಳಿಕ ಮಹಾ ಮೈತ್ರಿಕೂಟದ ನಾಯಕನಾಗಿ ಅವರನ್ನು ಚುನಾಯಿಸಲಾಗುತ್ತದೆ.

ವೆಬ್ದುನಿಯಾವನ್ನು ಓದಿ