ವಿ.ಕೆ.ಶಶಿಕಲಾಗೆ ವಿಐಪಿ ಸೌಲಭ್ಯ ನೀಡಿಲ್ಲ: ಡಿಐಜಿ ಸ್ಪಷ್ಟನೆ

ಬುಧವಾರ, 1 ಮಾರ್ಚ್ 2017 (20:46 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ ಯಾವುದೇ ರೀತಿಯ ವಿಐಪಿ ಸೌಲಭ್ಯ ನೀಡಿಲ್ಲ ಎಂದು ಜೈಲಿನ ಮೂಲಗಳು ತಿಳಿಸಿವೆ.
 
ಚೆನ್ನೈ ಮೂಲದ ವಕೀಲರೊಬ್ಬರ ಆರ್‌ಟಿಐ ಪ್ರಶ್ನೆಗೆ ಉತ್ತರಿಸಿದ ಡಿಐಜಿ(ಜೈಲು ನಿರ್ವಹಣೆ), ಶಶಿಕಲಾ ಕೋಣೆಯಲ್ಲಿ ಟಿವಿ ಸೌಲಭ್ಯ ಬಿಟ್ಟು ಇತರ ಸೌಲಭ್ಯಗಳನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ, ತನ್ನ ಅತ್ತಿಗೆ ಇಳವರಸಿ ಮತ್ತು ಸೋದರಳಿಯ ಸುಧಾಕರನ್ ಅವರೊಂದಿಗೆ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
 
ಶಶಿಕಲಾ ಅವರನ್ನು ಭೇಟಿಯಾಗಲು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಅವರ ಸೋದರಳಿಯ ಟಿ.ಟಿ.ವಿ. ದಿನಕರನ್ ಆಗಮಿಸಿ ಸುಮಾರು 35 ರಿಂದ 40 ನಿಮಿಷಗಳ ಕಾಲ ಭೇಟಿಯಾಗಿದ್ದರು ಎಂದು ಪೊಲೀಸ್ ಮಹಾನಿರ್ದೇಶಕರು ಆರ್‌ಟಿಐ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಗೆ ಲಿಖಿತ ಉತ್ತರ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ