ದೇಶದ ಏಕತೆ ಜತೆ ರಾಜಿ ಇಲ್ಲ: ನರೇಂದ್ರ ಮೋದಿ

ಶುಕ್ರವಾರ, 22 ಏಪ್ರಿಲ್ 2022 (10:02 IST)
ನವದೆಹಲಿ : ರಾಷ್ಟ್ರ ರಾಜಧಾನಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಮತೀಯ ಘರ್ಷಣೆಗಳ ಬಗ್ಗೆ ಇದೇ ಮೊದಲ ಬಾರಿ ಪರೋಕ್ಷವಾಗಿ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ,

‘ಯಾವುದೇ ಕಾರಣಕ್ಕೂ ದೇಶದ ಸಮಗ್ರತೆ ಹಾಗೂ ಏಕತೆಯ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಗುರುವಾರ ನಾಗರಿಕ ಸೇವೆಗಳ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ, ‘ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಸಮಾನತೆ, ಜಾಗತೀಕರಣ ಹಾಗೂ ಏಕತೆ ಎಂಬ ಮೂರು ಸವಾಲುಗಳು ಇಂದು ನಮ್ಮ ಮುಂದಿವೆ.

ಯಾವತ್ತೂ ನಾವು ಭಾರತದ ಏಕತೆ ಹಾಗೂ ಸಮಗ್ರತೆಯ ಜೊತೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದು ನಮ್ಮ ಹಾಗೂ ಪ್ರತಿಯೊಬ್ಬ ನಾಗರಿಕ ಸೇವಾ ಅಧಿಕಾರಿಯ ಪ್ರಥಮ ಹಾಗೂ ಅತ್ಯುನ್ನತ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

ಸ್ವಾತಂತ್ರ್ಯ ದೊರೆತ 100ನೇ ವರ್ಷ ಭಾರತ ಹೇಗಿರಬೇಕು ಎಂಬ ದೂರದೃಷ್ಟಿಯನ್ನು ನಾವು ಎಲ್ಲರೊಂದಿಗೆ ಹಂಚಿಕೊಳ್ಳಬೇಕು. ದೇಶದ ಪ್ರತಿಯೊಂದು ಜಿಲ್ಲೆಯೂ ಮುಂದಿನ 25 ವರ್ಷಗಳಿಗೆ ಗುರಿ ನಿಗದಿಪಡಿಸಿಕೊಂಡು ಅದನ್ನು ಸಾಧಿಸುವತ್ತ ಶ್ರಮಿಸಬೇಕು ಎಂದೂ ಇದೇ ವೇಳೆ ನಾಗರಿಕ ಸೇವೆಯ ಅಧಿಕಾರಿಗಳನ್ನುದ್ದೇಶಿಸಿ ಮೋದಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ