ಜಹಂಗೀರ್ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ತಡೆ
ದೆಹಲಿಯ ಜಹಂಗೀರ್ ಬಡಾವಣೆಯಲ್ಲಿ ಒತ್ತುವರಿ ತೆರುವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಸೋಮವಾರ ನಡೆದ ಕೋಮುಗಲಭೆ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ದಿಢೀರನೆ ಜಹಂಗೀರ್ ಬಡಾವಣೆ ತೆರವು ಕಾರ್ಯಾಚರಣೆ ಆರಂಭಿಸಿತು. ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಮಸೀದಿ ಹಾಗೂ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲಸಮಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಕೂಡಲೇ ತೆರವು ಕಾರ್ಯಾಚರಣೆ ನಿಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಸ್ಥಳೀಯ ಆಡಳಿತ ನೆಲಸಮ ಕಾಮಗಾರಿ ಮುಂದುವರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರಿಂಕೋರ್ಟ್ ಬುಧವಾರ ಎರಡು ಬಾರಿ ಮಧ್ಯಪ್ರವೇಶ ಮಾಡಬೇಕಾಯಿತು.
ಗುರುವಾರ ಬೆಳಿಗ್ಗೆ ತೆರವು ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್, ಕೂಡಲೇ ಸಮಗ್ರ ವರದಿ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದೆ.