ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ಬಂಗಲೆ ಇಲ್ಲ

ಸೋಮವಾರ, 1 ಆಗಸ್ಟ್ 2016 (17:18 IST)
ವಿವಿಐಪಿ ಒತ್ತುವರಿ ಮೇಲೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್  ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ವಸತಿ ಸೌಲಭ್ಯವಿರುವುದಿಲ್ಲ. ಅಧಿಕಾರದಿಂದ ಕೆಳಗಿಳಿದ ಎರಡು ತಿಂಗಳೊಳಗೆ ಅವರು ಸರ್ಕಾರಿ ಬಂಗಲೆಯನ್ನು ತೆರವು ಮಾಡಬೇಕು ಎಂದಿದೆ.

ಸ್ವಯಂ ಸೇವಾ ಸಂಸ್ಥೆ ಲೋಕ ಪ್ರಹಾರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿದಂತೆ ಉತ್ತರ ಪ್ರದೇಶದ 6 ಮಾಜಿ ಮುಖ್ಯಮಂತ್ರಿಗಳಿಗೆ ತಾವು ವಾಸವಾಗಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ ಆದೇಶಿಸಿದೆ.

ಇತರ ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳಿಗೂ ಈ ಆದೇಶ ಅನ್ವಯಿಸುತ್ತದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ