ಹನಿಟ್ರ್ಯಾಪ್ ಕುರಿತಂತೆ ವರುಣ್ ಗಾಂಧಿ ಹೇಳಿಕೆಯೇ ಅಂತಿಮ: ಬಿಜೆಪಿ

ಶನಿವಾರ, 22 ಅಕ್ಟೋಬರ್ 2016 (13:22 IST)
ಹನಿಟ್ರ್ಯಾಪ್ ವಿವಾದದಲ್ಲಿ ಸಿಲುಕಿದ ಬಿಜೆಪಿ ಸಂಸದ ವರುಣ್ ಗಾಂಧಿ ಸ್ಪಷ್ಟನೆ ನೀಡಿದ್ದರಿಂದ ಪಕ್ಷ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
 
ಹನಿಟ್ರ್ಯಾಪ್‌ನಲ್ಲಿ ಸಿಲುಕಿದ ನಂತರ ವರುಣ್ ಗಾಂಧಿ, ಆರೋಪಿ ಅಭಿಷೇಕ್ ವರ್ಮಾಗೆ ರಹಸ್ಯ ಸೇನಾ ಮಾಹಿತಿಗಳನ್ನು ರವಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ತಮ್ಮ ವಿರುದ್ಧದ ಆರೋಪಗಳನ್ನು ವರುಣ್ ಗಾಂಧಿ ತಳ್ಳಿಹಾಕಿದ್ದಾರೆ.
 
ವರುಣ್ ಗಾಂಧಿ ವಿಷಯದ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದು, ಬಿಜೆಪಿ ಹೈಕಮಾಂಡ್ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ಶ್ರೀಕಾಂತ್ ಶರ್ಮಾ ತಿಳಿಸಿದ್ದಾರೆ.
 
ಬಿಜೆಪಿ ಸಂಸದ ವರುಣ್ ಗಾಂಧಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ.
 
ಶಸ್ತ್ರಾಸ್ತ್ರ ಹಗರಣದ ಆರೋಪಿ ಅಭಿಷೇಕ್ ವರ್ಮಾ ಲಂಡನ್‌ನಲ್ಲಿ ಪೋಸ್ಟ್ ಗ್ರ್ಯಾಜುಯೇಟ್ ವಿದ್ಯಾರ್ಥಿಯಾಗಿದ್ದಾಗ ನಾನು ಅವರನ್ನು ಭೇಟಿಯಾಗಿದ್ದೇನೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ