ನಂಬರ್ ಬದಲಾವಣೆ ಇಲ್ಲ ಎಂದ ಟೆಲಿಕಾಂ ಕಂಪೆನಿ

ಗುರುವಾರ, 22 ಫೆಬ್ರವರಿ 2018 (06:25 IST)
ನವದೆಹಲಿ : ಜುಲೈ 1ರಿಂದ 10 ಸಂಖ್ಯೆಯ ಮೊಬೈಲ್ ನಂಬರ್ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ನಂಬರ್ ಅನ್ನು 13 ಡಿಜಿಟ್ ಗೆ ಬದಲಾಯಿಸಬೇಕು ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದ್ದು, ಆದರೆ ಇದೀಗ ಅದು ಸುಳ್ಳು ಸುದ್ದಿ ಎಂಬ ಮಾಹಿತಿ ತಿಳಿದುಬಂದಿದೆ.


ಜುಲೈ 1ರಿಂದ 10 ಸಂಖ್ಯೆಯ ಮೊಬೈಲ್ ನಂಬರ್ ಅನ್ನು 13 ಡಿಜಿಟ್ ಗೆ ಬದಲಾಯಿಸಬೇಕು ಎಂಬ ದೂರಸಂಪರ್ಕ ಇಲಾಖೆಯ (ಡಿಓಟಿ) ಆದೇಶ ಮೆಷಿನ್ ಟು ಮೆಷಿನ್(ಎಂ2ಎಂ) ಸಿಮ್ ಗಳಿಗೆ ಮಾತ್ರ ಸೀಮಿತವಾಗಿದ್ದು ಪೀರ್ ಟು ಪೀರ್(ಪಿ2ಪಿ) ಸಿಮ್ ಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಸುಳ್ಳು ಸುದ್ದಿ ಪ್ರಕಟವಾಗುತ್ತಿದ್ದಂತೆ ಟೆಲಿಕಾಂ ಕಂಪೆನಿಗಳಾದ ಏರ್‍ಟೆಲ್, ರಿಲಯನ್ಸ್ ಜಿಯೋ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿ ಯಾವುದೇ ಕಾರಣಕ್ಕೂ ಗ್ರಾಹಕರ ನಂಬರ್ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ. ಆದ್ದರಿಂದ ಮೊಬೈಲ್ ಸಂಖ್ಯೆಗಳು ಈಗ ಹೇಗೆ 10 ಸಂಖ್ಯೆಗಳು ಇದೆಯೋ ಅದು ಹಾಗೆಯೇ ಮುಂದುವರಿಯುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ