ನವದೆಹಲಿಯಲ್ಲಿ ಮೊದಲ ರಾಷ್ಟ್ರೀಯ ಬುಡಕಟ್ಟು ಕಾರ್ನಿವಲ್, ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಬಡಕಟ್ಟು ಜನಾಂಗದವರು ತಮ್ಮ ಹಕ್ಕನ್ನು ಪಡೆದಿದ್ದಾರೆ ಎಂಬುದನ್ನು ಖಚಿತ ಪಡಿಸಿಕೊಳ್ಳವುದು ಸರ್ಕಾರದ ಆದ್ಯ ಕರ್ತವ್ಯ. ಅವರ ಭೂಮಿಯನ್ನು ಕಸಿದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದರು.
ಭಾರತ 300 ಪ್ರಮುಖ ಬುಡಕಟ್ಟು ಗುಂಪುಗಳ ನೆಲೆಯಾಗಿದ್ದು, ಪ್ರತಿಯೊಂದು ಸಂಸ್ಕೃತಿ, ಆಚರಣೆ, ಸಂಪ್ರದಾಯ, ನಂಬಿಕೆ, ಮತ್ತು ಭಾಷೆಗಳಲ್ಲಿ ಪರಸ್ಪರ ಭಿನ್ನವಾಗಿದೆ.
1,600 ಬಡುಕಟ್ಟು ಕಲಾವಿದರು ಮತ್ತು ದೇಶದ ಮೂಲೆ ಮೂಲೆಗಳಿಂದ ಸುಮಾರು 8,000 ಬುಡಕಟ್ಟು ಪ್ರತಿನಿಧಿಗಳನ್ನು ಸಮಾವೇಶಕ್ಕೆ ಸ್ವಾಗತಿಸಿದ ಮೋದಿ, ತಾನು ಬುಡಕಟ್ಟು ಪ್ರಾಬಲ್ಯ ಪ್ರದೇಶಗಳಲ್ಲಿ ಕೆಲಸ ಮಾಡಿದ್ದಾಗಿ ಹಳೆಯ ದಿನಗಳನ್ನು ನೆನಪಿಸಿಕೊಂಡರು.