ನಮ್ಮಲ್ಲಿ ಯಾರೂ ಕೂಡ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡಲ್ಲ- ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕೇನ್
ಭಾನುವಾರ, 3 ಜೂನ್ 2018 (16:37 IST)
ನವದೆಹಲಿ : 2019 ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾದರಿಯಲ್ಲೇ ದೆಹಲಿಯಲ್ಲೂ ಕಾಂಗ್ರೆಸ್ ಎಎಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಕೇಳಿಬಂದಿರುವ ಹಿನ್ನಲೆಯಲ್ಲಿ ಈ ಬಗ್ಗೆ ಇದೀಗದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕೇನ್ ಅವರು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮಾನ ಹಾನಿ ಮಾಡಿ ಪ್ರಧಾನಿ ಮೋದಿ ಎಂಬ ರಾಕ್ಷಸ ಹುಟ್ಟಲು ಅರವಿಂದ್ ಕೇಜ್ರಿವಾಲ್ ಅವರೇ ಕಾರಣ, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಪರವಾಗಿ ನಾನು ಸ್ಪಷ್ಟಪಡಿಸುತ್ತಿದ್ದೇನೆ. ಯಾವುದೇ ಕಾರಣಕ್ಕೆ ನಮ್ಮಲ್ಲಿ ಯಾರೂ ಕೂಡ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡಲ್ಲ. ಕೇಜ್ರಿವಾಲ್ ಗೆ ಜನರೇ ಬೆಂಬಲ ನೀಡಿಲ್ಲ. ಇನ್ನು ನಾವೇಕೆ ಬೆಂಬಲ ನೀಡೋಣ , ಕೇಜ್ರಿವಾಲ್ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ