ಸೋನಿಯಾ ಅನುಪಸ್ಥಿತಿಯಲ್ಲಿ ಅವರ ಸ್ಥಾನದಲ್ಲಿ ಬೇರೆಯವರನ್ನು ಕಾಣಲು ಯಾರು ಬಯಸುವುದಿಲ್ಲ

ಶುಕ್ರವಾರ, 11 ನವೆಂಬರ್ 2016 (15:28 IST)
ಪಕ್ಷದ ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ಅವರ ಆಯ್ಕೆಯ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಬಲವಾದ ಒಲವು ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸೋನಿಯಾ ಅನುಪಸ್ಥಿತಿಯಲ್ಲಿ ಅವರ ಸ್ಥಾನದಲ್ಲಿ ಬೇರೆಯವರನ್ನು ಕುಳ್ಳಿಸಲು ಯಾರು ಕೂಡ ಬಯಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. 
 
ಪಣಜಿಯಲ್ಲಿ ಮಾಧ್ಯಮದವರೊಂದಿಗೆ ಮಾತನ್ನಾಡುತ್ತಿದ್ದ ಅವರು, ಸೋನಿಯಾ ಅನುಪಸ್ಥಿತಿಯಲ್ಲಿ ಅವರ ಸ್ಥಾನಕ್ಕೆ ಬೇರೆಯವರನ್ನು ತರುವುದನ್ನು ನಮ್ಮ ಪಕ್ಷದಲ್ಲಿ ಯಾರು ಕೂಡ ಬಯಸುವುದಿಲ್ಲ. ರಾಹುಲ್ ಗಾಂಧಿ ಆಯ್ಕೆಯನ್ನು ಸಹ ಯಾರು ಕೂಡ ಪ್ರಶ್ನಿಸಿಲ್ಲ. ಅಧ್ಯಕ್ಷ ಹುದ್ದೆಗೆ ರಾಹುಲ್ ಆಯ್ಕೆಗೆ ಇದು ಸೂಕ್ತ ಸಮಯ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಮ್ಮತದಿಂದ ಅಭಿಪ್ರಾಯ ಪಟ್ಟಿತು. ಆದರೆ ಈ ನಿರ್ಧಾರ ಸೋನಿಯಾ ಅವರಿಗೆ ಬಿಟ್ಟಿದ್ದು. ಸೂಕ್ತ ಸಮಯ ಎಂದು ಅನ್ನಿಸಿದಾಗ ಅವರು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಅವರು ನಮ್ಮ ವಿವಾದಾತೀತ ನಾಯಕಿ ಎಂದಿದ್ದಾರೆ ಸಿಂಗ್.
 
ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ   ಕಾಂಗ್ರೆಸ್ ಕಾರ್ಯಕಾರಿ ಸಮಿತಿ  ಸಭೆಯನ್ನು ನಡೆಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದಾಗಿ ಸೋನಿಯಾ ಗಾಂಧಿ ಸಭೆಗೆ ಹಾಜರಾಗಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ