ಸೇತುವೆ ಕುಸಿತ ವಿಚಾರದಲ್ಲಿ ರಾಜಕೀಯ ಮಾಡಲ್ಲ : ಖರ್ಗೆ

ಸೋಮವಾರ, 31 ಅಕ್ಟೋಬರ್ 2022 (17:42 IST)
ನವದೆಹಲಿ : ಗುಜರಾತ್ ಮೋರ್ಬಿ ಸೇತುವೆ ಕುಸಿತದಿಂದ ಅನೇಕ ಮಂದಿ ಪ್ರಾಣಕಳೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೇಸರ ವ್ಯಕ್ತಪಡಿಸಿದ್ದು,
 
ಸೇತುವೆ ಕುಸಿತಕ್ಕೆ ಕಾರಣವೇನೆಂಬುವುದರ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟಿದವರಿಗೆ ಸಂತಾಪ ಸೂಚಿಸುತ್ತೇನೆ. ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೇತುವೆ ಯಾಕೆ ಕುಸಿದಿದೆ.

ಅಲ್ಲಿ ಇಷ್ಟು ಜನರು ಓಡಾಡಲು ಅವಕಾಶ ನೀಡಿದವರು ಯಾರು? ಈ ಎಲ್ಲದರ ಬಗ್ಗೆ ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು.

ಮೃತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಎಲ್ಲ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ