ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

ಶುಕ್ರವಾರ, 26 ಜನವರಿ 2018 (06:16 IST)
ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ಸರಿಯಾದ ಆಸನದ ವ್ಯವಸ್ಥೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಮುಜುಗರಕ್ಕೆ ಈಡುಮಾಡಲು  ಮೋದಿ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಕೆಲ ನಾಯಕರು ದೂರಿದ್ದಾರೆ.


ಈ ಹಿಂದೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೊದಲ ಸಾಲಿನಲ್ಲಿ ರಾಹುಲ್ ಗಾಂಧಿಗೆ ಆಸನ ಮೀಸಲಿಡಲಾಗುತ್ತಿತ್ತು. ಆದರೆ ಈಗ ನಾಲ್ಕನೇ ಸಾಲಿನಲ್ಲಿ ಆಸನ ನಿಗದಿಪಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಅವರಿಗೆ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ರಾಜಕೀಯ ನಾಯಕರು, ಸಚಿವರ ಆಸನಗಳ ವ್ಯವಸ್ಥೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ