ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಭದ್ರತೆ ಕುರಿತಂತೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಲು ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿರುವ ರಾಜಭವನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜಾನುವಾರುಗಳನ್ನು ವಧೆಗಾಗಿ ಖರೀದಿಸುವ, ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿರುವ ಕೇಂದ್ರ ಸರ್ಕಾರದ ವಿರುದ್ಧ 2 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಬೀಫ್ ಪಾರ್ಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಎ ನೀಡಿರುವ ರಾಜನಾಥ್ ಸಿಂಗ್, ಆಹಾರ ಅವರವರ ಆಯ್ಕೆಗೆ ಬಿಟ್ಟ ವಿಚಾರವಾಗಿದ್ದು, ಕೇಂದ್ರ ಸರ್ಕಾರ ಯಾರ ಮೇಲೆಯೂ ನಿರ್ಬಂಧ ಹೇರುವುದಿಲ್ಲ ಎಂದು ತಿಳಿಸಿದ್ದಾರೆ.