ಕಾಂಗ್ರೆಸ್ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ: ಆರ್ ಟಿಐ ಮಾಹಿತಿಯಿಂದ ಬಹಿರಂಗ

ಬುಧವಾರ, 8 ಮೇ 2019 (08:03 IST)
ನವದೆಹಲಿ: ಯುಪಿಎ ಕಾಲಾವಧಿಯಲ್ಲೂ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂಬ ಕಾಂಗ್ರೆಸ್ ಹೇಳಿಕೆಗೆ ಇದೀಗ ಮುಖಭಂಗವಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ ಎಂದು ಆರ್ ಟಿಐ ಮಾಹಿತಿ ಬಹಿರಂಗಪಡಿಸಿದೆ.


2016 ರಲ್ಲಿ ಉರಿ ದಾಳಿಯ ನಂತರ ನಡೆದ ಸರ್ಜಿಕಲ್ ಸ್ಟ್ರೈಕ್ ಗೆ ಮೊದಲು ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಆರ್ ಟಿಐ ಮಾಹಿತಿ ಬಹಿರಂಗಪಡಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಜಮ್ಮು ಮೂಲದ ಆರ್ ಟಿಐ ಕಾರ್ಯಕರ್ತ ರೋಹಿತ್ ಚೌಧರಿ ಎಂಬವರು 2004 ರಿಂದ 2014 ರೊಳಗೆ ಯಾವುದಾದರೂ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತಾ ಎಂದು ಆರ್ ಟಿಐಗೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಿಂದ ಈ ಅಂಶ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ