ಯಶವಂತ್ ಸಿನ್ಹಾಯಿಂದ ನಾಮಪತ್ರ ಸಲ್ಲಿಕೆ
ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳೂ ಗರಿಗೆದರಿವೆ.
ಈ ನಡುವೆ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎನ್ಸಿಪಿಯ ಶರದ್ ಪವಾರ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ ಉಪಸ್ಥಿತರಿದ್ದರು.
ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆ.ಟಿ. ರಾಮರಾವ್ ಅವರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮತ್ತು ಕೆಲವು ಟಿಆರ್ಎಸ್ ಸಂಸದರೂ ಉಪಸ್ಥಿತರಿದ್ದರು.