ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ !

ಶುಕ್ರವಾರ, 19 ಆಗಸ್ಟ್ 2022 (08:16 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ತೆರವುಗೊಳಿಸಿದ ನಂತರ ಇದೇ ಮೊದಲಬಾರಿಗೆ ಚುನಾವಣೆ ನಡೆಯುತ್ತಿದ್ದು, ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2019 ರಲ್ಲಿ 370ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಾಗಲಿದೆ. ಇದರಿಂದ ಕಾಶ್ಮೀರೇತರೂ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಅನುವು ಮಾಡಿಕೊಡಲಿದೆ. 

ಜಮ್ಮು ಹಾಗೂ ಕಾಶ್ಮೀರ ಮುಖ್ಯ ಚುನಾವಣಾ ಅಧಿಕಾರಿ ಹಿರ್ದೇಶ್ ಕುಮಾರ್, ಚುನಾವಣೆಗೆ ಮುನ್ನ 20 ಲಕ್ಷಕ್ಕೂ ಅಧಿಕ ಹೊಸ ಮತದಾರರು ಈ ಪ್ರದೇಶದಲ್ಲಿ ನೋಂದಣಿಯಾಗುವ ಸಾಧ್ಯತೆ ಇದೆ. ಇದರಿಂದ ಮತದಾರರ ಸಂಖ್ಯೆ ಶೇ.33ಕ್ಕೂ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ಈ ಕೇಂದ್ರಾಡಳಿತ ಪ್ರದೇಶದಲ್ಲಿ 76 ಲಕ್ಷ ಮತದಾರರಿದ್ದಾರೆ ಎಂದು ಹೇಳಿದ್ದಾರೆ.

370ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಈ ಮೊದಲು ಮತ ಹಾಕಲು ಸಾಧ್ಯವಿಲ್ಲದವರೂ ಈಗ ಮತದಾರರಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ಈ ಹಿನ್ನೆಲೆ ಕಾಶ್ಮೀರಿಯಲ್ಲದವರು ಸೇರಿ ಮತದಾರರ ಅಂತಿಮ ಪಟ್ಟಿಯಲ್ಲಿ 20 – 25 ಲಕ್ಷ ಹೊಸ ಮತದಾರರು ಸೇರ್ಪಡೆಯಾಗುವ ಸಾಧ್ಯತೆಯಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ