ಪಾಕಿಸ್ತಾನದಲ್ಲಿರುವ ಪ್ರತಿಯೊಬ್ಬರು ಭಯೋತ್ಪಾದಕರಲ್ಲ: ರಾಜನಾಥ್

ಶನಿವಾರ, 24 ಜನವರಿ 2015 (19:13 IST)
ಪಾಕಿಸ್ತಾನದಲ್ಲಿ ಭಯೋತ್ಪಾದನೆ ಚಟುವಟಿಕೆಗಳಲ್ಲಿ ಹೆಚ್ಚಳವಾಗಿದ್ದರೂ ಅಧಿಕಾರಕ್ಕೆ ಬಂದ ಸರಕಾರಗಳು ಉಗ್ರರನ್ನು ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿವೆ. ಪಾಕ್‌ನಲ್ಲಿರುವ ಪ್ರತಿಯೊಬ್ಬರು ಭಯೋತ್ಪಾದಕರಲ್ಲ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ಪಾಕ್ ಸರಕಾರಗಳು ದೇಶದಲ್ಲಿ ಬೀಡು ಬಿಟ್ಟಿರುವ ಉಗ್ರರ ನಾಶದ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿವೆ. ಇತರ ಉದ್ದೇಶಗಳಿಗಾಗಿ ಸರಕಾರ ಉಗ್ರರನ್ನು ಬೆಂಬಲಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕ್ ಪ್ರಧಾನಿ ನವಾಜ್ ಷರೀಫ್‌ಗೆ ಆಹ್ವಾನ ನೀಡಿ ಗೆಳೆತನದ ಹಸ್ತವನ್ನು ಚಾಚಿದ್ದರೂ ಗಡಿಭಾಗಗಳಲ್ಲಿ ನಿರಂತರವಾಗಿ ಶಾಂತಿ ಉಲ್ಲಂಘನೆಯಾಗುತ್ತಿದೆ. ಆದರೆ, ಯಾವುದೇ ಸಂದರ್ಭದಲ್ಲಿ ಭಾರತ ತಿರುಗೇಟು ನೀಡಲು ಸಿದ್ದವಾಗಿದೆ ಎಂದು ಸ್ಪಷ್ಟಪಡಿಸಿದರು.
 
ಕಳೆದ ಆರು ತಿಂಗಳುಗಳಲ್ಲಿ ಪಾಕಿಸ್ತಾನ ಭಾರತದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದೆ. ಉಗ್ರರ ದಾಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ