ಅಕ್ರಮ ಹಣ ವರ್ಗಾವಣೆ: ದೇಶಾದ್ಯಂತ 27 ಬ್ಯಾಂಕ್ ಅಧಿಕಾರಿಗಳ ಸಸ್ಪೆಂಡ್

ಶುಕ್ರವಾರ, 2 ಡಿಸೆಂಬರ್ 2016 (19:54 IST)
ದೇಶಾದ್ಯಂತ ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ 27 ಬ್ಯಾಂಕ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.
 
ಕೇಂದ್ರ ಹಣಕಾಸು ಸಚಿವಾಲಯ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಿದ್ದು ರಾಜ್ಯದಲ್ಲಿ ಆರು ಬ್ಯಾಂಕ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ ತಿಳಿಸಿದೆ. 
 
ನೋಟು ಬ್ಯಾನ್ ಮಾಡಿದ ಬಳಿಕ ಅಕ್ರಮ ಹಣ ವರ್ಗಾವಣೆಯಲ್ಲಿ ಭ್ಯಾಂಕ್ ಅಧಿಕಾರಿಗಳ ಕೈವಾಡ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ